ಬೆಂಗಳೂರು, ಆ.02 (DaijiworldNews/HR): ಕೊರೊನಾದಿಂದಾಗಿ ಶಿಕ್ಷಣ ಇಲಾಖೆಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ಕೆಲ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿದ್ದು ಅಂತವರಿಗೆ ಆಗಸ್ಟ್ 19 ಕ್ಕೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಸಾಂಧರ್ಭಿಕ ಚಿತ್ರ
ಜುಲೈ 20 ರಂದು ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದು, ಫಲಿತಾಂಶಕ್ಕೂ ಮೊದಲು ಪಿಯು ಬೋರ್ಡ್ ವಿದ್ಯಾರ್ಥಿಗಳಿಗೆ ಸೂಚನೆಯೊಂದನ್ನು ನೀಡಿದೆ. ಫಲಿತಾಂಶವನ್ನು ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದು, ಇದೀಗ ರಾಜ್ಯಾದ್ಯಂತ ಬರೋಬ್ಬರಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ಫಲಿತಾಂಶವನ್ನು ತಿರಸ್ಕರಿಸಿದ್ದಾರೆ.
ಇನ್ನು ಫಲಿತಾಂಶವನ್ನು ತಿರಸ್ಕರಿಸಿದ 878 ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಂದು ದ್ವೀತಿಯ ಪಿಯುಸಿ ಪರೀಕ್ಷೆಯನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದು ಬಂದಿದೆ.