ಬೆಂಗಳೂರು, ಆ.02 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಜಾರಿಗೆ ತಂದ ಲಾಕ್ಡೌನ್ ಕಾರಣದಿಂದ ಲಕ್ಷಾಂತರ ಮಂದಿ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಮತ್ತೆ ಲಾಕ್ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ದಿನ ನಿತ್ಯ ಸುಮಾರು 2000 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದು ಮೂರನೇ ಅಲೆ ಆರಂಭವಾಗುವ ಮುನ್ಸೂಚನೆ. ಕೂರ್ನಾ ಸೋಂಕನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದರು.
ಇನ್ನು "ರಾಜ್ಯದ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಬಿಜೆಪಿಯ ಶಾಸಕರು ಸಚಿವ ಸಂಪುಟ ರಚನೆಯ ಬಗ್ಗೆ ಮಾತ್ರ ಯೋಚನೆ ಮಾಡುತ್ತಿದ್ದಾರೆ. ಉಳಿದದ್ದನ್ನು ಮರೆತು ಬಿಟ್ಟಿದ್ದಾರೆ. ದೆಹಲಿಗೆ ಮರಳಿ ಹೋಗುವ ಅಗತ್ಯವೆನಿತ್ತು? ಸ್ಥಳೀಯ ಶಾಸಕರಾಗಿಲಿ, ಬಿಜೆಪಿ ಹೈಕಮಾಮಡ್ ಆಗಲಿ ಕರ್ನಾಟಕದ ಬಗ್ಗೆ ಯಾವ ಕಾಳಜಿಯನ್ನು ಹೊಂದಿಲ್ಲ" ಎಂದು ಕಿಡಿ ಕಾರಿದ್ದಾರೆ.