ಹುಬ್ಬಳ್ಳಿ, ಆ.02 (DaijiworldNews/HR): "ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಬೇಡ, ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ" ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಬೇರೆ ಬೇರೆ ಇಲಾಖೆಗಳ ಸಚಿವನಾಗಿ ಅಧಿಕಾರದಲ್ಲಿ ಇದ್ದದ್ದು ಕೆಲವೇ ತಿಂಗಳು ಮಾತ್ರ. ಮುಖ್ಯಮಂತ್ರಿಯಾಗಿ 10 ತಿಂಗಳು ಮಾತ್ರ ಅಧಿಕಾರದಲ್ಲಿದ್ದೆ. ಪೂರ್ಣಾವಧಿ ಅಧಿಕಾರದಲ್ಲಿ ಇದ್ದಿದ್ದರೆ ಸಂಬಂಧಪಟ್ಟ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೆ" ಎಂದರು
ಇನ್ನು "ನಾನು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿ ತೋಡಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ಸಂಬಂಧಪಟ್ಟವರಿಂದ ಕೆಲಸ ಮಾಡಿಸುತ್ತೇನೆ. ಅಲ್ಲದೆ ಯಾರೇ ಅಧಿಕಾರಕ್ಕೆ ಬಂದರೂ ಅವರಿಂದ ಕೆಲಸ ಮಾಡಿಸುತ್ತೇನೆ" ಎಂದು ಹೇಳಿದ್ದಾರೆ.