ನವದೆಹಲಿ, ಆ. 02 (DaijiworldNews/SM): ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಲು ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಕೇಂದ್ರದ ವರಿಷ್ಟರನ್ನು ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾಳೆ ಸಂಜೆ ಅಂತಿಮ ತೀರ್ಮಾನವಾಗಲಿದೆ. ಈಗಾಗಲೇ ಎರಡು ಮೂರು ಪಟ್ಟಿಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ಯಾರು ಡಿಸಿಎಂಗಳಾಗಲಿದ್ದಾರೆ ಎನ್ನುವುದು ಕೂಡ ನಾಳೆಯೇ ತಿಳಿಯಲಿದೆ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.