ಬೆಂಗಳೂರು, ಆ 03 (DaijiworldNews/MS): ಜೆಡಿಎಸ್ ಪಕ್ಷದ ಕುರಿತು ಕೇಂದ್ರದ ಮಾಜಿ ಸಚಿವ ದಿವಗಂತ ಅನಂತಕುಮಾರ್ ಅವರ ಪುತ್ರಿ ವಿಜೇತಾ ಟ್ವೀಟ್ ನಲ್ಲಿ ಬರೆದುಕೊಂಡಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ವಿಜೇತಾ ಜೆಡಿಎಸ್ ಸೇರುತ್ತಾರಾ ಎಂಬ ಬಿಸಿಬಿಸಿ ಚರ್ಚೆಯಾಗಿತ್ತು.'
ಇದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ನಾನು ಮಾಡಿದ ಟ್ವೀಟೊಂದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ನಾನು ಮಾಡಿರುವ ಈ ಟ್ವಿಟ್ ಎಲ್ಲಾಗೊಂದಲಗಳಿಗೆ ತೆರೆ ಎಳೆಯಲಿದ್ದು ಚರ್ಚೆಯನ್ನು ಇಲ್ಲಿಗೆ ಮುಕ್ತಾಯಗೊಳಿಸಲಿದೆ. ನಿಮ್ಮೆಲ್ಲರೊಂದಿಗೆ ಇಲ್ಲಿ ಸಂವಹನ ನಡೆಸಲು ಇಷ್ಟಪಡುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ' ಎಂದು ವಿಜೇತಾ ಟ್ವೀಟ್ ಮಾಡಿದ್ದಾರೆ.
'ರಾಜಕೀಯದಲ್ಲಿ ಸಿದ್ಧಾಂತ ಮತ್ತು ವಿಶ್ಲೇಷಣೆ ಅಥವಾ ಅವಲೋಕನಗಳು ಇರುತ್ತವೆ. ಸಾಮಾನ್ಯವಾಗಿ ಇವುಗಳನ್ನು ಒಂದೇ ಎಂದು ಭಾವಿಸಿ ಗೊಂದಲಕ್ಕೆ ಗೊಂದಲಕ್ಕೊಳಗಾಗುತ್ತವೆ. ಜೆಡಿಎಸ್ ಕುರಿತ ಹೇಳಿಕೆಯು ನನ್ನ ಅವಲೋಕನವಷ್ಟೇ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬ ಸದಸ್ಯರ ಜತೆ ತಳುಕು ಹಾಕುವುದು ಸರಿಯಲ್ಲ ಎಂದು ವಿಜೇತಾ ಹೇಳಿದ್ದಾರೆ. ರಾಜಕೀಯದ ಕಲಿಕೆ ಬಗ್ಗೆ ಆಸಕ್ತಿಯುಳ್ಳವಳಾಗಿ ಇದು (ಜೆಡಿಎಸ್ ಕುರಿತ ಹೇಳಿಕೆ) ನನ್ನ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬದ ಸದಸ್ಯರ ಕಲ್ಪನೆಯೊಟ್ಟಿಗೆ ತಳಕು ಹಾಕುವುದು ಅನ್ಯಾಯವಾಗಿದೆ.
ಸುಮಾರು 35 ವರ್ಷಗಳಿಂದ ನನ್ನ ತಂದೆಯವರು ಲಕ್ಷಾಂತರ ಕಾರ್ಯಕರ್ತರ ಸಹಕಾರದೊಂದಿಗೆ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ತಾಯಿ ಹಸಿವು, ಪೌಷ್ಟಿಕತೆ, ಪರಿಸರ ಕ್ಷೇತ್ರಗಳಲ್ಲಿ ಮತ್ತು ಪಕ್ಷಕ್ಕಾಗಿ ನಿರಂತರವಾ ದುಡಿಯುತ್ತಿದ್ದಾರೆ. ನೀವು ರಾಜಕೀಯ ಪ್ರವೇಶಿಸಲಿದ್ದೀರಾ ಎಂದು ಅನೇಕರು ನನ್ನನ್ನು ಪ್ರಶ್ನಿಸಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಪಯಣವು ಈ ರೀತಿ ಆರಂಭವಾಗಬಾರದು ಎಂದು ನಾನು ಭಾವಿಸುತ್ತೇನೆ. ಅದು ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವಲ್ಲಿಂದ ಪ್ರಾರಂಭವಾಗಬೇಕು. ಕಾರ್ಯಕರ್ತರ ಬೆಂಬಲ ಮತ್ತು ಅವರಿಂದ ದೊರೆಯುವ ಪಾಠ ನಿಮ್ಮನ್ನು ನಾಯಕನನ್ನಾಗಿ ಮಾಡುತ್ತದೆ.
ಯಾರೂ ಶತ್ರುಗಳಲ್ಲ ಹಾಗೂ ಪರಸ್ಪರ ಗೌರವಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಭೂತ ವಿಚಾರ ಎಂದು ಅಪ್ಪ ನನಗೆ ಕಲಿಸಿದ್ದರು. ನಾನು ಯಾವುದೇ ಪಕ್ಷಕ್ಕೆ ಸೇರುತ್ತೇನೆಂದು ನನ್ನ ಗೌರವದ ಅಭಿವ್ಯಕ್ತಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ನಾನು ಮುಂದೆ ಒಂದು ಸುದೀರ್ಘ ಪ್ರಯಾಣವನ್ನು ಹೊಂದಿದ್ದೇನೆ ಮತ್ತು ನನ್ನ ಮಾತೃಭೂಮಿಯ ಸೇವೆಗಾಗಿ ನನ್ನ ಕಲಿಕೆಯನ್ನು ಹೆಚ್ಚಿಸಲು ಬಯಸುತ್ತೇನೆ ಎಂದಿರುವ ವಿಜೇತಾ, ಕೊನೆಯಲ್ಲಿ ದೇಶವೇ ಮೊದಲೂ ಎಂದು ಬರೆದುಕೊಂಡಿದ್ದಾರೆ