ಬೆಂಗಳೂರು, ಆ.03 (DaijiworldNews/HR): ಆಗಸ್ಟ್ 5 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂಧರ್ಭಿಕ ಚಿತ್ರ
ಕರಾವಳಿಯಲ್ಲಿ ಆಗಸ್ಟ್ 5 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಲಾಗಿದೆ.
ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ 11 ಸೆಂ.ಮೀ. ಗೂ.ಹೆಚ್ಚು ಮಳೆ ನಿರೀಕ್ಷೆಯಿರುವುದರಿಂದ ಆಗಸ್ಟ್ 5 ಮತ್ತು 6 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ.