ಶಿಮ್ಲಾ, ಆ.03 (DaijiworldNews/HR): ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿ ಮೂವರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವರದಿ ಪ್ರಕಾರ ಮಂಗಳವಾರ ಕಸೌಲಿ ಉಪ ವಿಭಾಗದ ಪರ್ವಾನೊ ಸೆಕ್ಟರ್ ಮೂರರ ಹೋಟೆಲ್ ಬಳಿ ಮುಂಜಾನೆ ಸುಮಾರು 2:30ರ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಇನ್ನು ರಕ್ಷಣಾ ಕಾರ್ಯ ಮುಂದುವರಿಸಿದ ತಂಡ ಓರ್ವನನ್ನು ರಕ್ಷಿಸಿದ್ದು, ಅವಶೇಷಗಳಡಿ ಸಿಲುಕಿದ್ದ ಇನ್ನಿಬ್ಬರ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.