ಬೆಂಗಳೂರು, ಆ.03 (DaijiworldNews/HR): ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಮೋದಿಯವರು ಮೂರು ನಾಮ ಹಾಕಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಡಿಜಿಪಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಲ್ಲ, ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿರುವ ಪ್ರಧಾನಿ, ಏಳು ವರ್ಷದಲ್ಲಿ ಹನ್ನೆರಡು ಕೋಟಿ ಉದ್ಯೋಗ ನಷ್ಟವಾಗಿದೆ. ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಮೋದಿಯವರು ಮೂರು ನಾಮ ಹಾಕಿದ್ದಾರೆ" ಎಂದರು.
ಇನ್ನು ಬಡ ಜನರ ತೆರಿಗೆ ಹಣದಲ್ಲಿ ಉಚಿತ ಅಕ್ಕಿ ಕೊಡಲು ಸರ್ಕಾರಕ್ಕೇನು ಸಮಸ್ಯೆ? ಬಡವರ ಹಣ ಯಾರಪ್ಪನ ಮನೆಯ ಸ್ವತ್ತಲ್ಲ, ಆ ಹಣವನ್ನು ಬಡವರಿಗಾಗಿಯೇ ಖರ್ಚು ಮಾಡುವುದರಲ್ಲಿ ಏನು ತಪ್ಪಿದೆ? " ಎಂದು ಪ್ರಶ್ನಿಸಿದ್ದಾರೆ.