ಬೆಂಗಳೂರು, ಆ.03 (DaijiworldNews/HR): ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಮೊದಲ ಹಂತದಲ್ಲಿ 24 ಜನರು ಸೇರ್ಪಡೆಗೊಳ್ಳಲಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸೋದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ರಚನೆ ಕುರಿತು ಚರ್ಚೆಗೆ ದೆಹಲಿಗೆ ಬಿಜೆಪಿ ಹೈಕಮಾಂಡ್ ಹಾಗೂ ವರಿಷ್ಠರ ಭೇಟಿಗಾಗಿ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸಂಜೆ 7.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ, ವಿಮಾನದಲ್ಲಿ ವಾಪಾಸ್ ಆಗುತ್ತಿದ್ದು, ಸಂಪುಟ ರಚನೆಯ ಪಟ್ಟಿಗೆ ಫೈನ್ ಪಡೆದಿದ್ದಾರೆ ಎನ್ನಲಾಗಿದೆ.
ಇನ್ನು ಈ ಪಟ್ಟಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಂಪುಟದಲ್ಲಿದ್ದಂತ ಕೆಲವು ಹಿರಿಯರನ್ನು ಕೈಬಿಟ್ಟಿರೋ ಸಾಧ್ಯತೆ ಕೂಡ ಇದೆ ಎನ್ನಲಾಗಿದ್ದು, ಕೆಲವರಿಗೆ ಸಚಿವ ಸ್ಥಾನ ನೀಡಿದರೂ, ಪಕ್ಷ ಸಂಘಟನೆಯಲ್ಲಿ ಹಿಂದುಳಿದಿರುವಂತ ಹಿರಿಯರಿಗೆ ಕೋಕ್ ನೀಡಲು ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ.