ಬೆಂಗಳೂರು, ಆ 04 (DaijiworldNews/MS): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಯ ಹಂತಕ್ಕೆ ತಲುಪಿದ್ದು, ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟದಲ್ಲಿ ಕಾರ್ಯ ನಿರ್ವಹಸಿದ್ದ ಆರು ಸಚಿವರ ಹೆಸರು ಕೈ ಬಿಡಲಾಗಿದೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಸಿಪಿ ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್ ಮತ್ತು ಶಂಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಇದರ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಅವರ ಹೆಸರು ಪಟ್ಟಿಯಲ್ಲಿ ಇಲ್ಲ ಎನ್ನಲಾಗಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಂಪುಟ ರಚನೆ ಆಗುತ್ತಿದ್ದಂತೆ ಬಿಎಸ್ ವೈ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದ ಸುರೇಶ್ ಕುಮಾರ್ ಪೇಸ್ ಬುಕ್ ನಲ್ಲಿ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. 'ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು' ಎಂದು ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ.