ಬೆಂಗಳೂರು, ಆ 04 (DaijiworldNews/PY): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ್ ಕತ್ತಿ, ಎಸ್. ಅಂಗಾರ, ಜೆ.ಸಿ ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್, ಸಿ.ಸಿ ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ಆರ್ ನಿರಾಣಿ, ಶಿವರಾಮ್ ಹೆಬ್ಬಾರ್, ಎಸ್.ಟಿ ಸೋಮಶೇಖರ್, ಬಿ.ಸಿ ಪಾಟೀಲ, ಭೈರತಿ ಬಸವರಾಜ, ಡಾ.ಕೆ. ಸುಧಾಕರ್, ಕೆ.ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜು, ಕೆ.ಸಿ ನಾರಾಯಣ ಗೌಡ, ಬಿ.ಸಿ ನಾಗೇಶ್, ವಿ. ಸುನೀಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ ಮುನೇನಕೊಪ್ಪ, ಮುನಿರತ್ನ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.