ಬೆಂಗಳೂರು, ಆ 05 (DaijiworldNews/MS): ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ನಡೆದಿದೆ. ಜಮೀರ್ ಅಹ್ಮದ್ ರ ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದಲ್ಲದೆ ಶಾಸಕ ಜಮೀರ್ ಅಹ್ಮದ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ , ಫ್ಲ್ಯಾಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಜಮೀರ್ ಅಹ್ಮದ್ ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆದಾಯ ವಿವರ, ಹೂಡಿಕೆ, ಸಂಪಾದನೆ ಆಸ್ತಿ ಮೊದಲ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.