ಬೆಂಗಳೂರು, ಆ 05 (DaijiworldNews/MS): ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ದಾಳಿ ನಡೆಸಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ರೋಷನ್ ಬೇಗ್ಗೆ ಸಂಬಂಧಿಸಿದ ಆಸ್ತಿಗಳಿರುವ 6 ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿಗಳು ಸಿಆರ್ಪಿಎಫ್ ಭದ್ರತೆ ನೇತೃತ್ವದಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಐಎಎಂ ಕೇಸ್ನಲ್ಲಿ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶಿಸಿತ್ತು.ಅದರಂತೆ ಇಂದು ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿಮಾಡಿದೆ. ರೋಷನ್ ಬೇಗ್ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ನ ಜಪ್ತಿ ಮಾಡಲಾಗಿದೆ.
ಇನ್ನೊಂದೆಡೆ ಕಾಂಗ್ರೆಸ್ ನ ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ.