ನವದೆಹಲಿ, ಆ 06 (DaijiworldNews/PY): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಸಿಗದ ಕಾರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ಅವರ ಭೇಟಿ ಮಾಡಲು ಸಮಯ ಕೇಳಲಾಗಿತ್ತು. ಆದರೆ, ಭೇಟಿಗೆ ಅವಕಾಶ ನಿರಾಕರಿಸಲಾಗಿದೆ" ಎಂದು ನಿತೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರನ್ನು ಜೆಡಿಯು ಸಂಸದರು ಭೇಟಿ ಮಾಡಲು ಉದ್ದೇಶಿಸಿದ್ದರು. ಆದರೆ, ಅದಕ್ಕೆ ಅವಕಾಶ ನಿರಾಕರಿಸಲಾಗಿದ್ದು, ಬದಲಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವಂತೆ ಸೂಚನೆ ನೀಡಲಾಗಿತ್ತು.
"ಜಾತಿ ಆಧಾರಿತ ಗಣತಿಯು ಕೆಲವರಲ್ಲಿ ಯಾವುದೇ ಕಾರಣವಿಲ್ಲದೆಯೂ ಅಸಮಾಧಾನ ಮೂಡಿಸಬಹುದು" ಎಂದಿದ್ದಾರೆ.