ಬೆಂಗಳೂರು, ಆ.06 (DaijiworldNews/HR): ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಆಗಸ್ಟ್ 7ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.
ಇನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಗುರುವಾರ ಫಲಿತಾಂಶ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಜೊತತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.