ನವದೆಹಲಿ, ಆ 06 (DaijiworldNews/MS): "ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ"ಯನ್ನು ಇನ್ನು ಮುಂದೆ "ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ" ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 6ರ ಶುಕ್ರವಾರ ಘೋಷಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಹೀಗಾಗಿ "ದೇಶಾದ್ಯಂತ ನಾಗರಿಕರ ಭಾವನೆಗಳನ್ನು ಗೌರವಿಸಲು ಖೇಲ್ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್ ಹೆಸರಿಡಲಾಗುವುದುಎಂದು ಅವರು ಹೇಳಿದರು.
ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.