ಮುಂಬೈ, ಆ.06 (DaijiworldNews/HR): ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಪೋರ್ನ್ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ವಿಶೇಷ ವಿಭಾಗ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಪೋರ್ನ್ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉದ್ಯಮಿ ರಾಜ್ ಕುಂದ್ರಾಅವರನ್ನು ಬಂಧಿಸಲಾಗಿದ್ದು, ಇದೀಗ ಶೆರ್ಲಿನ್ ಚೋಪ್ರಾಗೆ ಸಮನ್ಸ್ ಜಾರಿ ಮಾಡಿದೆ.
ಇನ್ನು ಗುರುವಾರ ಮುಂಬೈ ಸೆಷನ್ಸ್ ನ್ಯಾಯಾಲಯವು ಉದ್ಯಮಿ ಮತ್ತು ನಟ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥಾರ್ಪೆ ಅವರ ಜಾಮೀನು ಅರ್ಜಿಗಳನ್ನು ಆ .10 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಈಗಾಗಲೇ ಕುಂದ್ರಾ ಮತ್ತು ಥಾರ್ಪೆ ಇಬ್ಬರೂ ತಮ್ಮ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು, ಪ್ರಸ್ತುತ ಇಬ್ಬರೂ ಅಶ್ಲೀಲ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.