ಬೆಂಗಳೂರು, ಆ 06 (DaijiworldNews/PY): ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಕೊರೊನಾ ನಿರ್ವಹಣೆ ಕುರಿತಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಸದ್ಯ ಇರುವ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಹಾಗೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಮಹಾರಾಷ್ಟ್ರ ಹಾಗೂ ಕೇರಳದ ಗಡಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ" ಎಂದಿದ್ದಾರೆ.
"ಗಡಿ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ" ಎಂದು ತಿಳಿಸಿದ್ದಾರೆ.