ಬೆಂಗಳೂರು, ಆ.06 (DaijiworldNews/HR): ಆಗಸ್ಟ್ 23 ರಿಂದ 9, 10, 12ನೇ ತರಗತಿಗಳ ಶಾಲಾ ಕಾಲೇಜುಗಳು ಆರಂಭವಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಆಗಸ್ಟ್ 23ರಿಂದ ಶಾಲಾ-ಕಾಲೇಜುಗಳು ಆರಂಭ ಆಗಲಿದ್ದು, 9, 10, 12ನೇ ತರಗತಿಗಳು ಆರಂಭವಾಗಲಿವೆ. ಬಳಿಕ 1ರಿಂದ 8ರವರೆಗಿನ ಶಾಲೆಗಳ ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು. ಆಗಸ್ಟ್ ಬಳಿಕ ಕೊರೊನಾ ತೀವ್ರತೆ ನೋಡಿ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.
ಇನ್ನು "ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುತ್ತಿದ್ದು, ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡಲಿದ್ದು, ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು" ಎಂದುತಿಳಿಸಿದ್ದಾರೆ.