ಶ್ರೀನಗರ, ಆ 06 (DaijiworldNews/PY): ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಪ್ರಾತಿನಿಧಿಕ ಚಿತ್ರ
ಕಾಶ್ಮೀರದ ರಜೌರಿ ಜಿಲ್ಲೆಯ ತನ್ಮಾಂಡಿ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಉಗ್ರರ ಇರುವಿಕೆ ಪತ್ತೆ ಹಚ್ಚಿದ ಸೇನಾಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಈ ವೇಳೆ ಉಗ್ರರು ಭದ್ರತಾಪಡೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಕೂಡಾ ಗುಂಡಿನ ದಾಳಿ ನಡೆಸಿದ್ದಾರೆ.
"ಒಟ್ಟು ನಾಲ್ವರು ಉಗ್ರರಿದ್ದು, ಈ ಪೈಕಿ ಇಬ್ಬರು ವಿದೇಶಿಗರು. ಬಹುಶಃ ಅವರು ಕಾಶ್ಮೀರ ಭಾಗದಿಂದ ಇತ್ತ ಕಡೆ ಸುಳಿದಿರಬೇಕು" ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುಖೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.
"ಗುರುವಾರ ರಾತ್ರಿಯಿಂದ ಗುಂಡಿನ ಚಕಮಕಿ ನಡೆದಿದ್ದು, 16 ಕಾರ್ಪ್ ಕಮಾಂಡೋಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ" ಎಂದು ಸೇನಾ ಮೂಲಗಳು ತಿಳಿಸಿವೆ.