ಬೆಳಗಾವಿ, ಆ.06 (DaijiworldNews/HR): ಬಿಜೆಪಿ ಸರ್ಕಾರದ ನೂತನ ಸಚಿವರಿಂದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕರು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ಇದ್ದಾರೆ. ಹಾಗಾಗಿ ಅವರ ಕಾರ್ಯವೈಖರಿಯನ್ನು ಈಗಾಗಲೇ ನೋಡಿದ್ದೇವೆ" ಎಂದರು.
ಇನ್ನು "ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಗಳನ್ನು ಮಾಡಿರಲಿಲ್ಲ. ಅದೇ ಪರಿಸ್ಥಿತಿ ಮುಂದುವರಿಯುತ್ತದೆ" ಎಂದು ಹೇಳಿದ್ದಾರೆ.