ಬೆಂಗಳೂರು, ಆ. 06 (DaijiworldNews/SM): ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮತ್ತೆ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ಬಗ್ಗೆ ರಾಜ್ಯ ಸರಕಾರ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ. ಇಂದು ರಾತ್ರಿಯಿಂದ ಆಗಸ್ಟ್ 16ರ ತನಕ ಮಾರ್ಗಸೂಚಿ ಜಾರಿಯಲ್ಲಿರಲಿದೆ.
ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜ ನಗರ ಹಾಗೂ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ರಾಜ್ಯದೆಲ್ಲೆಡೆ ನೈಟ್ ಕರ್ಫ್ಯೂ ಇಂದಿನಿಂದಲೇ ಜಾರಿಗೆ ಬಂದಿದೆ.
ರಾಜ್ಯ ಸರಕಾರದ ಮಾರ್ಗಸೂಚಿಯಲ್ಲಿ ಏನಿದೆ?
ಸರ್ಕಾರಿ ಕಚೇರಿ, 24 ಗಂಟೆ ಕಾರ್ಯಾಚರಿಸುವ ಕೈಗಾರಿಕೆ ತೆರೆಯಬಹುದು
ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತು ಪಡೆಯಲು ಅವಕಾಶ
ಮಧ್ಯ ಮಾರಾಟ - ಪಾರ್ಸೆಲ್ ಮಾತ್ರ ಅವಕಾಶ (ಬೆಳಗ್ಗೆ 5ರಿಂದ ಮಧ್ಯಾಹ್ನ 2)
ಹೋಟೆಲ್, ರೆಸ್ಟೋರೆಂಟ್ನಲ್ಲಿ ಪಾರ್ಸೆಲ್, ಹೋಂ ಡೆಲಿವರಿಗೆ ಅವಕಾಶ
ವಿಮಾನ ನಿಲ್ದಾಣ, ರೈಲ್ವೇ ಪ್ರಯಾಣಕ್ಕೆ ಅನುಮತಿ - ಪ್ರಯಾಣದ ಟಿಕೆಟ್ ಕಡ್ಡಾಯ
ರಾಜಕೀಯ, ಕ್ರೀಡೆ, ಮನೋರಂಜನೆ, ಸಾಂಸ್ಕೃತಿಕ, ಧಾರ್ಮಿಕ ಸಭೆ, ಸಮಾರಂಭ ನಿಷೇಧ
ಮದುವೆಗೆ ಅವಕಾಶ- 100 ಜನರೊಂದಿಗೆ ನಡೆಸಲು ಅವಕಾಶ
ಅಂತಿಮ ಸಂಸ್ಕಾರಕ್ಕೆ 20 ಜನರಿಗೆ ಅವಕಾಶ
ರಾತ್ರಿ 9ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿ