ಬೆಂಗಳೂರು, ಆ 07 (DaijiworldNews/PY): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದು, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕರ್ನಾಟಕದಾದ್ಯಂತ ಇರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಕೂಡಲೇ ಅನ್ನಪೂಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಬೇಕು ಎಂದು ಸಿಎಂ ಅವರಲ್ಲಿ ಮನವಿ ಮಾಡುತ್ತೇವೆ" ಎಂದಿದ್ದಾರೆ.
"ಕನ್ನಡಿಗರು ಆಹಾರ ಸೇವಿಸುವಾಗ ಇಂದಿರಾ ಗಾಂಧಿ ಅವರ ಹೆಸರಿನ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನುಏಕೆ ನೆನಪಿಸಿಕೊಳ್ಳಬೇಕು?" ಎಂದು ಪ್ರಶ್ನಿಸಿದ್ದಾರೆ.