ಮುಂಬೈ, ಆ 07 (DaijiworldNews/MS): ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ರಾಜ್ ಕುಂದ್ರಾ ತಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.
ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಮುಂಬೈ ಹೈಕೋರ್ಟ್ ನಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಮೇಲ್ಮನವಿಯನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ರಾಜ್ ಕುಂದ್ರಾ ಹಾಗೂ ರಿಯಾನ್ ಥಾರ್ಪೆ ಅವರ ಮೇಲ್ಮನವಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಅರ್ಜಿ ತಿರಸ್ಕರಿಸುವ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಬಂಧನ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.
ಜುಲೈ 27ರಂದು ಮುಂಬೈನ ನ್ಯಾಯಾಲಯವೊಂದು ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ರಾಜ್ ಕುಂದ್ರಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಬಂಧನದ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ. ಮತ್ತು ಸೆಷನ್ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದೂ ಸರಿಯಾಗಿದೆ ಎಂದು ಇಂದು ತೀರ್ಪು ನೀಡಿದೆ. ಅಶ್ಲೀಲ ಚಿತ್ರ ತಯಾರಿಕೆ ಮತ್ತು ಹಂಚಿಕೆ ಪ್ರಕರಣದಲ್ಲಿ ಇದುವರೆಗೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ.