ಬೆಂಗಳೂರು, ಆ 07 (DaijiworldNews/PY): ಸ್ಯಾಂಡಲ್ವುಡ್ ಹಿರಿಯ ನಟಿ ಲೀಲಾವತಿ ಅವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಸೊಂಟ ಹಾಗೂ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಲೀಲಾವತಿ ಅವರು ಕಾಲು ಜಾರಿ ಬಿದ್ದಿದ್ದು, ಅವರಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
"ತಾಯಿ ಲೀಲಾವತಿ ಅವರು ಮನೆಯಲ್ಲಿ ಕಾಲುಜಾರಿ ಬಿದ್ದಿದ್ದು, ಅವರಿಗೆ ಪೆಟ್ಟಾಗಿದೆ. ತಕ್ಷಣವೇ ಅವರನ್ನು ವೈದ್ಯರ ಬಳಿ ಚಿಕಿತ್ಸೆ ಕರೆದೊಯ್ದು, ಚಿಕಿತ್ಸೆ ನೀಡಲಾಗಿದೆ. ವೈದ್ಯರು ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ" ಎಂದು ಲೀಲಾವತಿ ಅವರ ಪುತ್ರನಟ ವಿನೋದ್ ರಾಜ್ ತಿಳಿಸಿದ್ದಾರೆ.
"ಲೀಲಾವತಿ ಅವರು ಬಚ್ಚಲು ಮನೆಗೆ ಹೋದ ಸಂದರ್ಭ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗದೇ ಸುಮಾರು ಅರ್ಧ, ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ನಂತರ ಸುಧಾರಿಸಿಕೊಂಡು ಬಾಗಿಲು ತೆರೆದು ಹೊರಬಂದಿದ್ದಾರೆ" ಎಂದು ಹೇಳಿದ್ದಾರೆ.