ಶ್ರೀನಗರ, ಆ.07 (DaijiworldNews/HR): ಭದ್ರತಾ ಪಡೆ ಇಂದು ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಹತನಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
"ಉಗ್ರರು ಬುಡ್ಗಾಮ್ ಜಿಲ್ಲೆಯ ಮೊಚುವಾ ಪ್ರದೇಶದಲ್ಲಿ ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಯು ಗುಂಡು ಹಾರಿಸಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಈ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದು, ಘಟನಾ ಸ್ಥಳದಿಂದ ಎಕೆ ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಈತ ಯಾವ ಸಂಘಟನೆಯ ಸದಸ್ಯ ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.
ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ಪುಲ್ವಾಮದ ಖ್ರೆವ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.