ಬೆಂಗಳೂರು, ಆ.07 (DaijiworldNews/HR): 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 9ರಂದು ಸೋಮವಾರ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸರ್ಕಾರದಿಂದ ಅನುಮೋದನೆ ಸಿಕ್ಕಿಲ್ಲದ ಹಿನ್ನಲೆ ಫಲಿತಾಂಶ ಪ್ರಕಟ ಇನ್ನೆರಡು ದಿನ ವಿಳಂಬ ಆಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಸರ್ಕಾರದಲ್ಲಿ ಆದ ಬೆಳವಣಿಗೆಗಳಿಂದ ನೂತನ ಸಚಿವರ ನೇಮಕಾತಿ ಆದ ಬಳಿಕ ಫಲಿತಾಂಶ ಪ್ರಕಟಕ್ಕೆ ಇಲಾಖೆ ಮುಂದಾಗಲಿದೆ ಎಂಬ ಮಾತು ಕೇಳಿ ಬಂದಿತು. ಮುಖ್ಯಮಂತ್ರಿಗಳು (Basavaraja Bommai) ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿ ಸಿ ನಾಗೇಶ್ (BC Nagesh) ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ನೂತನ ಸಚಿವರೇ ಸೋಮವಾರ ಫಲಿತಾಂಶ ಪ್ರಕಟ ಮಾಡಲಿದ್ದಾರೆ ಎನ್ನಲಾಗಿದೆ.
ಮೌಲ್ಯಮಾಪನ ಕಾರ್ಯ ಈಗಾಗಲೇ ಮುಗಿದಿದ್ದು, ಫಲಿತಾಂಶ ಪ್ರಕಟ ಮಾಡಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಯಾರಿ ನಡೆಸಿದ್ದು, ಸೋಮವಾರ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಿಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಖಚಿತ ಮಾಹಿತಿ ನೀಡಿದೆ.
ಈ ಬಾರಿ 8 ಲಕ್ಷದ 71 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆಗಸ್ಟ್ 9ರಂದು ಫಲಿತಾಂಶ ಪ್ರಕಟ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು kseeb.kar.nic.in ಅಥವಾ karresults.nic.in. ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಅಲ್ಲದೆ examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ನೋಡಬಹುದು.