ಬೆಂಗಳೂರು, ಆ.07 (DaijiworldNews/HR): ಆಗಸ್ಟ್ 9ರ ಸೋಮವಾರ ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, "ಜುಲೈ.19 ಮತ್ತು 22ರಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 09ರ ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದ್ದಾರೆ.
ಇನ್ನು ಕೊರೊನಾ ಭೀತಿಯ ನಡುವೆಯೂ ಈ ಬಾರಿ 8.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆಗಸ್ಟ್ 9ರ ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟಗೊಳ್ಳಲಿರುವಂತ ಫಲಿತಾಂಶದಲ್ಲಿ, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.