ಶ್ರೀನಗರ, ಆ 08 (DaijiworldNews/PY): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ರಾಸಿಂಗ್ನಲ್ಲಿ ಪೊಲೀಸ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಮಾಜಿ ಸಚಿವ ಅಬ್ದುಲ್ ಮಜೀದ್ ಪದಾರ್ ಅವರನ್ನು ಅವರ ನಿವಾಸಕ್ಕೆ ಕರೆದೊಯ್ದು ಬಿಟ್ಟು ವಾಪಾಸ್ಸಾಗುತ್ತಿದ್ದ ಸಂದರ್ಭ ಆದಿಜನ್ ಕ್ರಾಸಿಂಗ್ನಲ್ಲಿ ಟ್ರಾಫಿಕ್ ನಿರ್ವಹಣೆಯಲ್ಲಿ ನಿರತರಾಗಿದ್ದ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಕುಲ್ಗಾಂ ಜಿಲ್ಲೆಯ ದಮ್ಹಾಲ್ ಹಂಜಿಪೋರಾದ ಪೊಂಬೈನಲ್ಲಿ ಪೊಲೀಸ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ.