ಬಂಕಾ, ಆ.08 (DaijiworldNews/HR): ದೇಶದಲ್ಲಿ ಮತ್ತೆ ಮಳೆ ಸಿಡಿಲಿನ ಆರ್ಭಟ ಜೋರಾಗಿದ್ದು, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಶನಿವಾರ ಸಿಡಿಲು ಬಡಿದು ಸುಮಾರು 24 ಜನ ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಶನಿವಾರ ಸಿಡಿಲು ಬಡಿದು ಬಿಹಾರದ ಬಂಕಾ ಜಿಲ್ಲೆಯಲ್ಲಿ 7 ಜನರು ಮೃತಪಟ್ಟಿದ್ದು, ಒಡಿಶಾದ ಮೂರು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರು ಸಿಡಿಲು ಬಡಿದು ಮೃತಪಟ್ಟು, ಐವರು ಗಾಯಗೊಂಡು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಜಾರ್ಖಂಡ್ನ ಹಜಾರಿಬಾಗ್ ಮತ್ತು ಪಲಾಮು ಜಿಲ್ಲೆಗಳಲ್ಲಿ ಶನಿವಾರ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತ ಘಟನೆಗಳಲ್ಲಿ ಇಬ್ಬರು ಐವರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.