ಬೆಂಗಳೂರು, ಆ 08 (DaijiworldNews/SM): ಟೋಕಿಯೊ ಒಲಿಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಛೋಪ್ರಾ ಅವರ ಸಾಧನೆ ಹಿಂದಿನ ಶಕ್ತಿಯಾಗಿರುವ ತರಬೇತುದಾರರಾದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡ ಸಚಿವ ಡಾ. ನಾರಾಯಣ ಗೌಡ ನಗದು ಬಹುಮಾನ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚಿನ್ನ ಗೆದ್ದ ನೀರಜ್ ಅವರಿಗೆ ತರಬೇತಿಯನ್ನು ಕನ್ನಡಿಗೆ ಶಿರಸಿಯ ಕಾಶಿನಾಥ್ ಅವರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯ ಕಾಣದ ಕೈ ಕಾಶಿನಾಥ್ ಅವರಾಗಿದ್ದು, ಅವರಿಗೆ ಇಲಾಖೆಯಿಂದ ಸನ್ಮಾನ ಹಾಗೂ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.