ಬೆಂಗಳೂರು, ಆ 09 (DaijiworldNews/MS): ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ. ಇಂದು (ಆ 09) ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕೊರೊನಾ ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ಜೂನ್19 ಹಾಗೂ ಜೂನ್ 22ರಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ 8.71 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಈ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.
ಇಂದು ಮಧ್ಯಾಹ್ನ 3:30 ಕ್ಕೆ https://sslc.Karnataka.gov.in -kseeb.kar.nic.in-karresults.nic.in ವೆಬ್ಸೈಟ್ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.