ಬೆಂಗಳೂರು, ಆ.09 (DaijiworldNews/HR): ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಇದೀಗ ಮತ್ತೊಂದು ಶಾಕ್ ನೀಡಿದ್ದು, ನೋಟೀಸ್ ಜಾರಿ ಮಾಡಿದ್ದಾರೆ.
ನೋಟಿಸ್ನಲ್ಲಿ 10 ದಿನಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸಿ, ಸ್ಪಷ್ಟನೆ ನೀಡುವಂತೆ ಇಡಿ ಅಧಿಕಾರಿಗಳು ತಿಳಿಸಿದ್ದು, ಜಮೀರ್ ಅಹ್ಮದ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ಇನ್ನು ಆಗಸ್ಟ್ 5ರಂದು ಜಮೀರ್ ಅಹ್ಮದ್ಗೆ ಸಂಬಂಧಿಸಿದ 15 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ದಾಳಿ ನಡೆಸಿದ ವೇಳೆ ಕೆಲ ದಾಖಲೆಗಳಿಲ್ಲದ ವಸ್ತು, ಆಸ್ತಿಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.