ನವದೆಹಲಿ, ಆ 09 (DaijiworldNews/PY): "ಧನಬಾದ್ ನ್ಯಾಯಾಧೀಶರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿನ ಪ್ರಗತಿ ವಿಚಾರವಾಗಿ ಜಾರ್ಖಂಡ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ವಾರಕ್ಕೊಮ್ಮೆ ಮೇಲ್ವಿಚಾರಣೆ ನಡೆಸಲಿದ್ದಾರೆ" ಎಂದು ಸೋಮವಾರ ಸುಪ್ರಿಂ ಕೋರ್ಟ್ ತಿಳಿಸಿದೆ.
"ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತೀ ವಾರ ಹೈಕೋರ್ಟ್ಗೆ ವರದಿ ಸಲ್ಲಿಸಬೇಕು. ಈ ವರದಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಮೇಲ್ವಿಚಾರಣೆ ನಡೆಸಲಿದೆ" ಎಂದು ಸಿಬಿಐಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ವಿನೀತ್ ಶರಣ್, ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಸೂಚನೆ ನೀಡಿದೆ.
ಜುಲೈ 28ರಂದು ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಜಡ್ಜಸ್ ಕಾಲೊನಿ ಬಳಿ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭ ವಾಹನ ಗುದ್ದಿಸಿ ಅವರನ್ನು ಹತ್ಯೆ ಮಾಡಲಾಗಿತ್ತು.