ಶ್ರೀನಗರ, ಆ 10 (DaijiworldNews/PY): ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಿಆರ್ಪಿಎಫ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾತಿನಿಧಿಕ ಚಿತ್ರ
ಶೋಪಿಯಾನ್ ಜಿಲ್ಲೆಯ ಕ್ರಾಲ್ಚೆಕ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ರಸ್ತೆ ತೆರವು ಕಾರ್ಯ ನಡೆಸುತ್ತಿದ್ದ ಸಂದರ್ಭ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಅಜಯ್ ಕುಮಾರ್ ಗಾಯಗೊಂಡಿದ್ದಾರೆ.
ಅಜಯ್ ಕುಮಾರ್ ಅವರ ಕೈಗೆ ಗುಂಡು ತಾಗಿ ಗಾಯವಾಗಿದ್ದು, ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.