ನವದೆಹಲಿ, ಆ 10 (DaijiworldNews/MS): ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ದೆಹಲಿಯ ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಸಿ.ಟಿ. ರವಿ ಮತ್ತು ದೇವೇಗೌಡರ ಭೇಟಿ ಸಹಜವಾಗಿಯೇ ರಾಜ್ಯದ ರಾಜಕೀಯ ನಾಯಕರ ಮನಸ್ಸಿನಲ್ಲಿ ಕುತೂಹಲ ಗರಿಕೆದರುವಂತೆ ಮಾಡಿದೆ. ಜೊತೆಗೆ ಭೇಟಿಯ ಬಳಿಕ ಎಚ್.ಡಿ. ದೇವೇಗೌಡರನ್ನು ಸಿಟಿ ರವಿ ಮನತುಂಬಿ ಹೊಗಳಿರುವುದು ವಿಶೇಷ.
ಆದರೆ ಸಿ.ಟಿ. ರವಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಕಾರಣಕ್ಕಲ್ಲ. ಬದಲಿಗೆ ಮಾಜಿ ಸಚಿವ ಸಿ.ಟಿ. ರವಿ ಭಾರತದ ರಾಜಕೀಯದ ಮೇಲೆ ಪಿಎಚ್ಡಿ ಮಾಡುತ್ತಿದ್ದಾರೆ. ಇದರ ಭಾಗವಾಗಿ ದೇವೇಗೌಡರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
" 88ನೇ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಲ್ಲಿರುವ ಉತ್ಸಾಹವನ್ನು ಪ್ರಶಂಸಿಸಬೇಕು.ಭಾರತೀಯ ರಾಜಕೀಯದ ಬಗ್ಗೆ ಅವರ ಜ್ಞಾನ ಮತ್ತು ಅನುಭವ ಅದ್ಭುತವಾಗಿದೆ. ನಿಮ್ಮ ಅನುಭವದ ಮಾತುಗಳನ್ನು ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು" ಎಂದು ಭೇಟಿ ಬಳಿಕ ಸಿ.ಟಿ. ರವಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.