ರಾಮನಗರ, ಆ.10(DaijiworldNews/HR): 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸೋಮವಾರ ಫೈಟರ್ ವಿವೇಕ್(35) ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾದ ನಿರ್ದೇಶಕ ಶಂಕರ್ ರಾಜ್, ಸಾಹಸ ಕಲಾವಿದ ವಿನೋದ್ ಹಾಗೂ ಕ್ರೇನ್ ಚಾಲಕ ಮುನಿಯಪ್ಪನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಬಿಡದಿಯ ಜೋಗನಪಾಳ್ಯ ಗ್ರಾಮದಲ್ಲಿ ಆಗಸ್ಟ್ 09ರಂದು ರಚ್ಚು ಲವ್ ಯು ಸಿನಿಮಾ ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಫೈಟರ್ ಹಾಗೂ ಯುವ ಕಲಾವಿದ ವಿವೇಕ್ ಸಾವಿಗೀಡಾಗಿದ್ದಾರೆ.
ಇನ್ನು ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಜಮೀನು ಮಾಲೀಕ ಪುಟ್ಟರಾಮು ಸ್ಥಳದಿಂದ ನಾಪತ್ತೆ ಆಗಿದ್ದು, ಆತನಿಗೆಗಾಗಿ ಪೊಲೀಸರ ಹುಟುಕಾಟ ಮುಂದುವರಿದಿದೆ.