ನವದೆಹಲಿ, ಆ 10 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, 28,204 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 147 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ.
ಸಾಂದರ್ಭಿಕ ಚಿತ್ರ
ಕಳೆದ 24 ಗಂಟೆಗಳಲ್ಲಿ 373 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 41,511 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 3,11,80,968 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 3,88,508ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 13,689ರಷ್ಟು ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ ಒಂದೇ ದಿನ 15,11,313 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 48,32,78,545 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,91,647 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಈವರೆಗೆ ಒಟ್ಟು 51,45,00268 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.