ಬೆಂಗಳೂರು, ಆ.10(DaijiworldNews/HR): "ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು" ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚಿಸಲಾಗಿದೆ.
ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.