ಮೈಸೂರು, ಆ.10(DaijiworldNews/HR): ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ ಯಾರು ಬೇಕಾದರೂ ಅವರು ಬಳಸಿರುವ ಪದವನ್ನು ಬಳಸಬಹುದು ಆದರೆ ಸಂಸ್ಕಾರ ಇರುವವರು ಅಂತಹ ಪದವನ್ನು ಬಯಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದ್ದು, ಅವರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು" ಎಂದಿದ್ದಾರೆ.
ಇನ್ನು ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನಿಡೋದು ಸರಿಯಲ್ಲ. ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತ್ನಾಡುತ್ತಿದ್ದಾರೆ. ಅವರಿಗೆ ಆರೋಗ್ಯಕರವಾದ ಸಂಸ್ಕೃತಿಯೇ ಇಲ್ಲ. ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು"ಎಂದು ಕಿಡಿಕಾರಿದ್ದಾರೆ.