ಬಾಗಲಕೋಟೆ, ಆ.10(DaijiworldNews/HR): ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮಂಗಳವಾರ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಐಶ್ವರ್ಯ ಶಂಕರ ಬಾರಕೇರ (16) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಐಶ್ವರ್ಯಾ ಅಪ್ಪ ಶಂಕರ ಬಾರಕೇರ 10 ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಅಮ್ಮ ಶಾಂತವ್ವ ಅವರೊಂದಿಗೆ ಅಲ್ಲಿನ ಭೋವಿ ಗಲ್ಲಿಯಲ್ಲಿ ವಾಸವಿದ್ದರು.
ಇನ್ನು ಸೋಮವಾರ ಫಲಿತಾಂಶ ಪ್ರಕಟವಾಗಿದ್ದು ಐಶ್ಚರ್ಯಾಗೆ ಶೇ 43 ಅಂಕ ಬಂದಿದ್ದವು. ಶೇ 95 ಅಂಕ ಬರಲಿದೆ ಎಂಬ ನಿರೀಕ್ಷೆಯಲ್ಲಿದ್ದ ಮಗಳು ಕಡಿಮೆ ಅಂಕ ಬಂದಿದ್ದರಿಂದ ಮನಸ್ಸಿಗೆ ನೋವು ಮಾಡಿಕೊಂಡಿದ್ದಳು ಎಂದು ಶಾಂತವ್ವ ಪೊಲೀಸರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.