ಬೆಂಗಳೂರು, ಆ.10(DaijiworldNews/HR): ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಹೆಸರನ್ನು ಮೇರಾ ನಾಮ್ ಜೋಕರ್ ಎಂದು ಬದಲಾಯಿಸಿಕೊಳ್ಳಲಿ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, "ಈಶ್ವರಪ್ಪನವರು ಉಪ ಮುಖ್ಯಮಂತ್ರಿ ಆಗಬೇಕೆಂದು ಎಷ್ಟೆಲ್ಲಾ ಕಾರ್ಯಾಚರಣೆ ಮಾಡಿದ್ದರು. ಉಪ ಮುಖ್ಯಮಂತ್ರಿ ಆಗದೇ ಇರುವುದರಿಂದ ಅವರಿಗೆ ಹುಚ್ಚು ಹಿಡಿದಿದೆ. ಆದಷ್ಟು ಬೇಗ ಅವರನ್ನು ನಿಮ್ಹಾನ್ಸ್ಗೆ ಸೇರಿಸಬೇಕು" ಎಂದಿದ್ದಾರೆ.
ಇನ್ನು ಈಶ್ವರಪ್ಪನವರು ತಮ್ಮ ಮನೆಯಲ್ಲೇ ನೋಟು ಲೆಕ್ಕ ಮಾಡುವ ಮೆಷಿನ್ ಇಟ್ಟುಕೊಂಡಿದ್ದರೂ ಕೂಡ ಅವರಿಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಹತಾಶೆಯಿಂದ ಮಾತನಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಉಚ್ಛಾಟಿಸಬೇಕು" ಎಂದು ಆಗ್ರಹಿಸಿದ್ದಾರೆ.