ಬೆಂಗಳೂರು, ಆ.11 (DaijiworldNews/HR): ಕರ್ನಾಟಕದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಯ 9 ಹಾಗೂ 10 ನೇ ತರಗತಿಯ ವಿದ್ಯಾರ್ಥಿಗಳ ತಂದೆ, ತಾಯಿ ಮತ್ತು ಪೋಷಕರಿಗೆ ಕೊರೊನಾ ಲಸಿಕೆ ನೀಡುವ ಕುರಿತು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಸಾಂಧರ್ಭಿಕ ಚಿತ್ರ
ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9 ನೇ ತರಗತಿ ಹಾಗೂ 10 ನೇ ತರಗತಿ ವಿದ್ಯಾರ್ಥಿಗಳ ಕೊರೊನಾ ಲಸಿಕೆ ಪಡೆಯದ ಪೋಷಕರಿಗೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಲು ಕೊರಲಾಗಿದೆ.
ಇನ್ನು ಶಾಲೆಯ ಮುಖ್ಯಸ್ಥರಿಂದ ತಂದೆ, ತಾಯಿ, ಪೋಷಕರುಗಳಿಗೆ ಮಾಹಿತಿ ತಲುಪಿಸಿ ಲಸಿಕೆ ಪಡೆಯುವವರ ಪಟ್ಟಿ ತಯಾರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ಒದಗಿಸಿ ಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ.