ಬೆಳಗಾವಿ, ಆ.11 (DaijiworldNews/HR): ಸಿದ್ದರಾಮಯ್ಯರಿಗೆ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ನಿತ್ಯ ಬೀಳುತ್ತಿದೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ ನಾನೇ ಮುಂದಿನ ಸಿಎಂ ಭ್ರಮೆಯಲ್ಲಿದ್ದಾರೆ" ಎಂದರು.
ಇನ್ನು "ಸಿದ್ದರಾಮಯ್ಯ ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್, ಪರಮೇಶ್ವರ, ಎಂ.ಬಿ. ಪಾಟೀಲ್ ಸೇರಿ ಎಲ್ಲರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುತ್ತಿದ್ದು, ಇವರೆಲ್ಲರ ಕೆಟ್ಟ ಕನಸು ಎಂದಿಗೂ ನನಸಾಗುವದಿಲ್ಲ. ಈ ಜನ್ಮದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ" ಎಂದಿದ್ದಾರೆ.
ಆನಂದ ಸಿಂಗ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, "ಸಂಪುಟ ರಚನೆ ಸಂದರ್ಭದಲ್ಲಿ ಕೆಲವರಿಗೆ ಅಸಮಾಧಾನವಾಗುವುದ ಸಹಜ. ಇಬ್ಬರಿಂದ ಮೂರು ಜನರಿಗೆ ಬೇಸರ ಇದೆ ಎಂಬುದು ನನ್ನ ಗಮನಕ್ಕೆ ಬಂದಿದ್ದು, ಇದನ್ನು ಮುಖ್ಯಮಂತ್ರಿ ಇತ್ಯರ್ಥ ಮಾಡುತ್ತಾರೆ" ಎಂದು ಹೇಳಿದ್ದಾರೆ.