ಧಾರಾವಾಡ, ಆ 11 (DaijiworldNews/MS): ಧಾರಾವಾಡ ಜಿಲ್ಲಾ ಪಂಚಾಯಿತಿ ಸದಸ್ಯ , ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಧಾರವಾಡಕ್ಕೆ ಭೇಟಿ ನೀಡದಿರುವುದೂ ಒಳಗೊಂಡಂತೆ ವಿವಿಧ ಷರತ್ತುಗಳನ್ನು ವಿಧಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದೆ
ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಹಿಂಡಲಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಬುಧವಾರ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.