ನವದೆಹಲಿ, ಆ 12 (DaijiworldNews/PY): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ಲಾಕ್ ಮಾಡಿದ ನಂತರ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ.
"ರಾಹುಲ್ ಗಾಂಧಿ ಅವರ ಟ್ವಿಟರ್ ಲಾಕ್ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ನ ರಣದೀಪ್ ಸುರ್ಜೇವಾಲಾ ಸೇರಿದಂತೆ ಅಜಯ್ ಮಾಕೆನ್, ಸುಶ್ಮಿತಾ ದೇವ್ ಹಾಗೂ ಮಾಣಿಕಮ್ ಠಾಗೋರ್ ಅವರ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ" ಎಂದು ಕಾಂಗ್ರೆಸ್ಗೆ ತಿಳಿಸಿದೆ.
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರ ಫೋಟೋ ಹಂಚಿಕೊಂಡಿದ್ದ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.