ಬೆಂಗಳೂರು, ಆ 12 (DaijiworldNews/PY): "ನೆಹರು ಹುಕ್ಕಾಬಾರ್ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಬಾರ್ ತೆರೆಯಲಿ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ಸಿಗರು ಬೇಕಿದ್ದರೆ ನೆಹರು ಹುಕ್ಕಾ ಬಾರ್ ತೆರೆಯಲಿ. ಕಾಂಗ್ರೆಸ್ ಕಚೇರಿಯಲ್ಲಿ ಕ್ಯಾಂಟೀನ್ ಮಾಡಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಮಾಡಬೇಕು ಎಂದು ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಬೇಕು" ಎಂದಿದ್ದಾರೆ.
ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಘಟನೆಯನ್ನು ಬಿಜೆಪಿ ಖಂಡಿಸುತ್ತದೆ. ವಿಶೇಷ ತಂಡದ ಮೂಲಕ ಈ ಬಗ್ಗೆ ತನಿಖೆ ಮಾಡಬೇಕು. ಈ ರೀತಿಯಾದ ಕೃತ್ಯ ನಡೆಸುವವರ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗ ಇಲ್ಲ. ಈ ರೀತಿಯಾದ ಘಟನೆಗಳಿಗೆ ನಾವು ಹೆದರುವುದಿಲ್ಲ" ಎಂದು ಹೇಳಿದ್ದಾರೆ.