ಬೆಂಗಳೂರು, ಆ 12 (DaijiworldNews/PY): "ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ರವಿಗೆ ಯಾವುದಾದರೂ ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ, ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ" ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಹುಚ್ಚುನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಿ. ಟಿ ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ. ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ರವಿಗೆ ಯಾವುದಾದರೂ ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ, ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ. ಹೇಗಿದ್ದರೂ ಬಿಜೆಪಿ ಹುಚ್ಚರ ಸಂತೆಯಲ್ಲವೇ?" ಎಂದು ಪ್ರಶ್ನಿಸಿದ್ದಾರೆ.
ನೆಹರು ಹಾಗೂ ಇಂದಿರಾ ಗಾಂಧಿಯವರ ಕಾಲಿನ ಧೂಳಿಗೂ ಸಮವಿಲ್ಲದ ಸಿ ಟಿ ರವಿ, ಅವರ ಬಗ್ಗೆ ಕೀಳಾಗಿ ಮಾತನಾಡುವುದು ಅವರ ಹೀನ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಕಚೇರಿಯನ್ನು ಹುಕ್ಕಾ ಬಾರ್ ಮಾಡಲು ಸಲಹೆ ಕೊಟ್ಟಿರುವ ರವಿ, ಕೇಶವ ಕೃಪಾ ಕಚೇರಿಯನ್ನು 'ಡ್ಯಾನ್ಸ್ ಬಾರ್' ಮಾಡಿ ಆಧುನಿಕ 'ಬೃಹನ್ನಳೆ'ಯಂತೆ ನಾಟ್ಯ ಮಾಡುತ್ತಾರೆಯೇ? ಎಂದು ಕೇಳಿದ್ದಾರೆ.
ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ ಟಿ ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಇವರಿಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಲಿ. ಆ ಯೋಜನೆಗೆ 'ಗೂಡ್ಸೆ' ಹೆಸರನ್ನು ಇಟ್ಟುಕೊಳ್ಳಲಿ ಎಂದಿದ್ದಾರೆ.