ಜಮ್ಮು, ಆ.13 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಹತ್ಯೆಗೀಡಾಗಿ ಇಬ್ಬರು ಯೋಧರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ಎಫ್ ಬೆಂಗಾವಲು ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹತ್ತಿರದ ಕಟ್ಟಡದಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿರುವ ಬಗ್ಗೆ ಶಂಕಿಸಲಾಗಿದೆ.
ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಕಟ್ಟಡದ ಸಂಪೂರ್ಣ ಶೋಧ ನಡೆಯಬೇಕಿದೆ ಎಂದು ಕಾಶ್ಮೀರ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ.