ಬಳ್ಳಾರಿ, ಆ 13 (DaijiworldNews/PY): "ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿ ನನ್ನ ಸಮಸ್ಯೆಯನ್ನು ತಿಳಿಸಿದ್ದೇನೆ. ಅವರು ಹೇಗೆ ಪರಿಹರಿಸುತ್ತಾರೆ" ಎಂದು ನೋಡೋಣ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಹೊಸಪೇಟೆಯ ವೇಣುಗೋಪಾಲಸ್ವಾಮಿ ದೇವಾಲಯದ ಬಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, "ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲಯೂ ಹೇಳಿಲ್ಲ. ಖಾತೆ ಬದಲಾವಣೆ ಮಾಡುವಂತೆ ಸಿಎಂ ಬೊಮ್ಮಾಯಿ ಅವರಲ್ಲಿ ಹೇಳಿದ್ದೇನೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರಲ್ಲೂ ಹೇಳಿದ್ದೇನೆ. ದುಡುಕಿನ ತೀರ್ಮಾನ ಕೈಗೊಳ್ಳಬಾರದು ಎಂದು ಅವರು ತಿಳಿಸಿದ್ದಾರೆ" ಎಂದಿದ್ದಾರೆ.
"ಆ.15ರಂದು ವಿಜಯನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ಮಾಡುತ್ತೇನೆ. ದೆಹಲಿಗೆ ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಕೆ ನೀಡಿಲ್ಲ. ನನ್ನ ಸಮಸ್ಯೆ ಬಗ್ಗೆ ಸಿಎಂ ಬಳಿ ಹೇಳಿದ್ದು, ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ" ಎಂದು ಹೇಳಿದ್ದಾರೆ.